Kannada News

ಕೇಂದ್ರ, ರಾಜ್ಯ ಸರ್ಕಾರದ ಯೋಜನೆಗಳ ಅನುಷ್ಠಾನ ಕುರಿತು ವಿಚಾರ ವಿನಿಮಯ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲೆ ಕಾರ್ಯಕಾರಿಣಿ ಸಭೆಯನ್ನು ನಗರದ ರೆಡ್ಡಿ ಭವನದಲ್ಲಿ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಾಧನೆಗಳ ಬಗ್ಗೆ ವಿಚಾರ ವಿನಿಮಯ, ಬೆಳಗಾವಿ ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳು, ಜನಸಾಮಾನ್ಯರಿಗೆ ತಲುಪುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಅನುಷ್ಠಾನದ ಬಗ್ಗೆ ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು.

ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ರಾಜ್ಯ ಕಾರ್ಯದರ್ಶಿ  ಉಜ್ವಲ ಬಡವಾನಾಚೆ, ಬೆಳಗಾವಿ ವಿಭಾಗ ಪ್ರಭಾರಿ ಬಸವರಾಜ್ ಕವಟಗಿ, ಬೆಳಗಾವಿ ವಿಭಾಗ ಸಹ ಪ್ರಭಾರಿ ಬಸವರಾಜ್ ಯಂಕಂಚಿ, ರಾಜ್ಯ ವಕ್ತಾರ ಎಂ. ಬಿ. ಜಿರಲಿ, ಬಿಜೆಪಿ ಹಿರಿಯ ಮುಖಂಡ ಆರ್.ಎಸ್. ಮುತಾಲಿಕ, ಮಹಾನಗರ ಪ್ರಭಾರಿ ರಮೇಶ ದೇಶಪಾಂಡೆ, ಮಹಾನಗರ ಜಿಲ್ಲಾ ಮಾಜಿ ಅಧ್ಯಕ್ಷ ರಾಜೇಂದ್ರ ಹರಕುಣಿ, ಬೆಳಗಾವಿ ವಿಭಾಗ ಸಹ ಸಂಘಟನಾ ಕಾರ್ಯದರ್ಶಿ ಜಯಪ್ರಕಾಶ್, ಬಿಜೆಪಿ ಮಹಾನಗರ ಮೋರ್ಚಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಉತ್ತರ ಮತ್ತು ದಕ್ಷಿಣ ಮಂಡಲದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಪ್ರಮುಖರು, ನಗರ ಸೇವಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಬೆಳಗಾವಿ: ಮಂಗಳವಾರ ಪತ್ರಿಕಾ ದಿನಾಚರಣೆ, ಗುರುವಂದನೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button