

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ತಾವು ಬಳಸಿದ ಶಬ್ದವೊಂದರ ಬಗ್ಗೆ ಬಿಜೆಪಿ ಶಾಸಕರೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಕ್ಷಮೆ ಯಾಚಿಸಿದ್ದಾರೆ.
ವಿಧಾನ ಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಕ್ಷಮೆಯಾಚಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ದಿನಾಂಕ: 24/08/2024 ಶನಿವಾರದಂದು ಬೆಂಗಳೂರಿನ ಪ್ಯಾಲೆಸ್ ಮೈದಾನದಲ್ಲಿ ಜಿಂದಾಲ್ ಕಂಪನಿಯ ಕುರಿತು ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ ಎಂದು ವೇಗವಾಗಿ ಹೇಳಿರುತ್ತೇನೆ, ಆ ಸಂದರ್ಭದಲ್ಲಿ ಮಾತ್ರ ಬಳಸಿದ ಈ ಪದದ ಬಳಕೆಯು ನನಗೆ ಶೋಭೆ ತಂದಿರುವುದಿಲ್ಲ, ತಮಗೆ ನಾನು ಈ ಪತ್ರದ ಮುಖಾಂತರ ಕ್ಷಮೆಯಾಚಿಸುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ