LatestUncategorized

*ಶಾಸಕರ ಕಾರು ಡಿಕ್ಕಿಯಾಗಿ ವೃದ್ಧೆ ಸಾವು*

ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಬಿಜೆಪಿ ಶಾಸಕ ಬಸವರಾಜ್ ದಡೇಸುಗೂರು ಅವರ ಕಾರು ಡಿಕ್ಕಿಯಾಗಿ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಬಳಿ ನಡೆದಿದೆ.

ಮರಿಯಮ್ಮ ನಾಯಕ್ (70) ಮೃತ ವೃದ್ಧೆ. ಮೈಲಾಪುರ ಕ್ರಾಸ್ ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ಮರಿಯಮ್ಮ ಅವರಿಗೆ ಕೊಪ್ಪಳ ಜಿಲ್ಲೆಯ ಕನಕಗಿರಿ ಬಿಜೆಪಿ ಶಾಸಕ ದಡೇಸುಗೂರು ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ನಾಯಿ ತಪ್ಪುಸಲು ಹೋಗಿ ಕಾರು ವೃದ್ಧೆಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮರಿಯಮ್ಮ ನಾಯಕ್ ಗಂಭೀರವಾಗಿ ಗಾಯಗೊಂಡಿದ್ದರು.

ಮರಿಯಮ್ಮ ಅವರನ್ನು ಶಾಸಕರು ಕಾರಟಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮರಿಯಮ್ಮ ಅವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಮರಿಯಮ್ಮ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಮೂಲತ: ಚೆಳ್ಲೂರು ಗ್ರಾಮದ ನಿವಾಸಿಯಾಗಿರುವ ಮರಿಯಮ್ಮ ಮೈಲಾಪುರದಲ್ಲಿ ಮಗಳ ಮನೆಯಲ್ಲಿ ನೆಲೆಸಿದ್ದರು. ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

*ಕಲುಷಿತ ನೀರು ಸೇವನೆ; ಮಹಿಳೆ ದುರ್ಮರಣ; ಹಲವರು ಅಸ್ವಸ್ಥ*

Home add -Advt

https://pragati.taskdun.com/poluted-waterwoman-died40-people-ill/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button