*ಎಸ್ ಪಿ ವಿರುದ್ಧ ನಾಲಿಗೆ ಹರಿಬಿಟ್ಟಿದ ಬಿಜೆಪಿ ಶಾಸಕನಿಗೆ ಎದುರಾಯ್ತು ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ : ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ಮನೆಯ ಪಮೋರಿಯನ್ ನಾಯಿ ಇದ್ದಂತೆ ಎಂದು ನಾಲಗೆ ಹರಿಬಿಟ್ಟಿದ್ದ ಬಿಜೆಪಿ ಶಾಸಕ ಹರೀಶ್ ಗೆ ಸಂಕಷ್ಟ ಎದುರಾಗಿದೆ.
ಈ ಹೇಳಿಕೆ ನೀಡಿದ ಬಿಜೆಪಿ ಶಾಸಕ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಹಿರಿಯ ಪೊಲೀಸ್ ಅಧಿಕಾರಿಯನ್ನು ನಾಯಿಗೆ ಹೋಲಿಸಿ ಉದ್ಧಟತನ ಮೆರೆದಿದ್ದರು. ಇದೀಗ ಅವರ ವಿರುದ್ಧ ದೂರು ದಾಖಲಾಗಿದೆ.
ಹರೀಶ್ ವಿರುದ್ಧ ಎಸ್‌ಪಿ ಉಮಾ ಪ್ರಶಾಂತ್ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಾಮನೂರು ಮನೆತನದವರು ಒಂದೊಂದು ಗಂಟೆ ಗೇಟ್ ಕಾಯಿಸುತ್ತಾರೆ. ಶಾಸಕರನ್ನು ಕಂಡರೆ ಎಸ್‌ಪಿ ಮುಖ ತಿರುಗಿಸುತ್ತಾರೆ ಎಂದು ಹರೀಶ್ ಟೀಕಿಸಿದ್ದರು. ಹೀಗೆ ಹೇಳಿಕೆ ನೀಡಿದ ಹರೀಶ್ ವಿರುದ್ಧ ಕೆಟಿಜೆ ನಗರ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ ಗಳಡಿ ಹರೀಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಶಾಸಕರಿಗೆ ನೋಟಿಸ್ ನೀಡಲಾಗಿದೆ.
ಇನ್ನು ಹರೀಶ್ ಹೇಳಿಕೆಗೆ ಸ್ಥಳೀಯ ಕಾಂಗ್ರೆಸ್ ನಾಯಕರು ಕೂಡ ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ. ಪೊಲೀಸ್ ಅಧಿಕಾರಿ ಹುದ್ದೆಗೆ ಅವಮಾನ ಆಗುವ ರೀತಿ ಹಗುರವಾಗಿ ಹೇಳಿಕೆ ನೀಡಿದ್ದಾರೆ. ಬಿಪಿ ಹರೀಶ್ ಎಲ್ಲೆ ಮೀರಿ ವರ್ತಿಸಿದ್ದಾರೆ. ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಒತ್ತಾಯ ಮಾಡಿದ್ದಾರೆ.