GIT add 2024-1
Laxmi Tai add
Beereshwara 33

*ಬಿಜೆಪಿ ಶಾಸಕನಿಗೆ ಜೀವ ಬೆದರಿಕೆ; ಮಾಜಿ ಕಾರ್ಪೊರೇಟರ್ ವಿರುದ್ಧ FIR ದಾಖಲು*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಶಾಸಕ, ಮಾಜಿ ಸಚಿವ ಕೆ.ಗೋಪಾಲಯ್ಯಗೆ ಜೀವ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಮಾಜಿ ಕಾರ್ಪೊರೇಟರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಪದ್ಮರಾಜು ತಡರಾತ್ರಿ ಶಾಸಕ ಕೆ.ಗೋಪಾಲಯ್ಯಗೆ ಕರೆ ಮಾಡಿ ಅವಾಚ್ಯಶಬ್ಧಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಹಾಕಿದ್ದಾಗಿ ಶಾಸಕರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಗೋಪಾಲಯ್ಯ, ಪದ್ಮರಾಜು ಈ ಹಿಂದೆ ಇತರ ಹಲವು ಶಾಸಕರಿಗೆ ಬೆದರಿಕೆ ಹಾಕಿದ್ದ. ಈಗ ನನಗೆ ಜೀವ ಬೆದರಿಕೆ ಹಾಕಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು. ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

Emergency Service

ಅಲ್ಲದೇ ಈ ಬಗ್ಗೆ ಸ್ಪೀಕರ್ ಖಾದರ್ ಅವರಿಗೂ ದೂರು ನೀಡಿದ್ದೇನೆ. ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪ ಮಾಡುತ್ತೇನೆ. ಈಗಾಗಲೇ ಸಿಎಂ ಹಾಗೂ ಗೃಹ ಸಚಿವರಿಗೂ ದೂರು ನೀಡಿದ್ದಾಗಿ ತಿಳಿಸಿದ್ದಾರೆ.


Bottom Add3
Bottom Ad 2