Kannada NewsKarnataka NewsLatest

*ಮಾಜಿ ಕಾರ್ಪೊರೇಟರ್ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಶಾಸಕ, ಮಾಜಿ ಸಚಿವ ಕೆ.ಗೋಪಾಲಯ್ಯಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್ ಪದ್ಮರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಾಸಕ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ ಹಾಗೂ ಅವಾಚ್ಯಶಬ್ಧಗಳಿಂದ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪದ್ಮರಾಜ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಪದ್ಮರಾಜ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಮಾಜಿ ಕಾರ್ಪೊರೇಟರ್ ಪದ್ಮರಾಜ್ ತಡರಾತ್ರಿ ಶಾಸಕ ಕೆ.ಗೋಪಾಲಯ್ಯಗೆ ಕರೆ ಮಾಡಿ ಅವಾಚ್ಯಶಬ್ಧಗಳಿಂದ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಹಾಕಿದ್ದಾಗಿ ಶಾಸಕರು ದೂರು ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ನೀಡಿದ್ದರು ಈ ಹಿನ್ನೆಲೆಯಲ್ಲಿ ಪದ್ಮರಾಜ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.

ಇನ್ನು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಗೋಪಾಲಯ್ಯ, ಪದ್ಮರಾಜು ಈ ಹಿಂದೆ ಇತರ ಹಲವು ಶಾಸಕರಿಗೆ ಬೆದರಿಕೆ ಹಾಕಿದ್ದ. ಈಗ ನನಗೆ ಜೀವ ಬೆದರಿಕೆ ಹಾಕಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು. ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

Home add -Advt

ಅಲ್ಲದೇ ಈ ಬಗ್ಗೆ ಸ್ಪೀಕರ್ ಖಾದರ್ ಅವರಿಗೂ ದೂರು ನೀಡಿದ್ದೇನೆ. ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪ ಮಾಡುತ್ತೇನೆ. ಈಗಾಗಲೇ ಸಿಎಂ ಹಾಗೂ ಗೃಹ ಸಚಿವರಿಗೂ ದೂರು ನೀಡಿದ್ದಾಗಿ ತಿಳಿಸಿದ್ದಾರೆ.


Related Articles

Back to top button