ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನಯಯಾಲಯ ಆದೇಶ ಹೊರಡಿಸಿದೆ.
ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಗೆ 1,38,65,000 ರೂಪಾಯಿ ಹಣ ನೀಡಬೇಕಿತ್ತು. ಆದರೆ ಹಣ ಕೊಡದೇ ಸಮಸ್ಯೆ ಮಾಡಿದ್ದರು. ಇದರಿಂದ ಬೇಸತ್ತ ಹೂವಪ್ಪ ಗೌಡ ಕೋರ್ಟ್ ಮೆಟ್ಟಿಲೇರಿದ್ದರು.
ಪ್ರಕರಣ ಸಂಬಂಧ ಕೋರ್ಟ್, ಶಾಸಕ ಎಂ.ಪಿ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಶಾಸಕರ ವಿರುದ್ಧ ದಾಖಲಾಗಿದ್ದ 8 ಕೇಸ್ ಗಳಲ್ಲಿ ತಲಾ 6 ತಿಂಗಳು ಶಿಕ್ಷೆ ಪ್ರಕಟವಾಗಿದೆ. ತಕ್ಷಣ ಸಾಲದ ಹಣ ಪಾವತಿ ಮಾಡಬೇಕು ಇಲ್ಲವಾದಲ್ಲಿ 4 ವರ್ಷ ಜೈಲುಶಿಕ್ಷೆ ಅನುಭವಿಸಬೇಕಾಗುತ್ತದೆ.
https://pragati.taskdun.com/sdpishafi-bellareelection-ticketr-ashok/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ