ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಸ್ಕ್ ಇಲ್ಲದೇ ಪ್ರಯಾಣಿಸಿದ್ದಕ್ಕಾಗಿ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಪೊಲೀಸರು ದಂಡ ವಿಧಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು ನೀಡಿರುವ ಶಾಸಕ, ಬೆಂಗಳೂರಿನ ಶೇಷಾದ್ರಿಪುರಂ ಕಡೆಯಿಂದ ಶಾಸಕರ ಭವನಕ್ಕೆ ತೆರಳುತ್ತಿದ್ದಾಗ ಶೇಷಾದ್ರಿಪುರಂ ಪೊಲೀಸ್ ಠಾಣಾ ಮುಂಭಾಗ ಸಂಚಾರಿ ವ್ಯತ್ಯಯದಿಂದ ಕಾರು ನಿಲುಗಡೆಗೊಂಡಿತು. ಈ ಸಂದರ್ಭದಲ್ಲಿ ಕಾರಿನ ಟಿಂಟ್ ಗ್ಲಾಸ್ ಇಳಿಸುವಂತೆ ಟ್ರಾಫಿಕ್ ಪೊಲೀಸರು ಒತಾಯಿಸಿ ಕಾರಿನೊಳಗಡೆ ಇದ್ದ ನನಗೆ ಮಾಸ್ಕ್ ಹಾಕಿಸಿದ್ದರು. ಬಳಿಕ 250 ರೂ ದಂಡ ವಿಧಿಸಿದ್ದಾರೆ.
ಜವಾಬ್ದಾರಿಯುತ ವ್ಯಕ್ತಿಯಾಗಿ ಮರು ಮಾತನಾಡದೇ ದಂಡ ಪಾವತಿಸಿದ್ದೇನೆ. ವಿನಾ ಕಾರಣ ನನ್ನ ಮೇಲೆ ದಂಡ ವಿಧಿಸಿರುವ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ