ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಅರೆಸ್ಟ್ ಆಗಿರುವ ಬಿಜೆಪಿ ಶಾಸಕ ಮುನಿರತ್ನರನ್ನು ಪೊಲೀಸರು ಬಂಧಿಸಿ ಶನಿವಾರ ತಡರಾತ್ರಿಯೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಮುನಿರತ್ನರನ್ನು ಬಂಧಿಸಿ ಬೆಂಗಳೂರಿಗೆ ಕರೆತಂದ ನಂತರ ಶನಿವಾರ ರಾತ್ರಿಯೇ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಎದುರು ಹಾಜರುಪಡಿಸಿದ ಪೊಲೀಸರು, ಶಾಸಕರನ್ನು ಒಂದು ವಾರ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ವಿಚಾರಣೆ ನಡೆಸಿದ ನ್ಯಾಯಾದೀಶರು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.
ಆಂಧ್ರಪ್ರದೇಶಕ್ಕೆ ಎಸ್ಕೆಪ್ ಆಗಲು ಯತ್ನಿಸಿದ್ದ ಶಾಸಕ ಮುನಿರತ್ನ ಅವರನ್ನು ಕೋಲಾರದ ಬಳಿ ಬಂಧಿಸಿ ಅಶೋಕ್‌ನಗರ ಠಾಣೆಗೆ ಕರೆತಂದ ಪೊಲೀಸರು ಮಧ್ಯರಾತ್ರಿ 12 ಗಂಟೆಯಿಮದ 1.30ರವರೆಗೆ ವಿಚಾರಣೆ ನಡೆಸಿ ಪ್ರಕರಣದ ವಿವರ ಪಡೆಯಲು ಯತ್ನಿಸಿದ್ದಾರೆ
ಆದರೆ ಪೊಲೀಸರ ಯಾವುದೇ ಪ್ರಶ್ನೆಗಳಿಗೂ ಸಮರ್ಪಕ ಉತ್ತರ ನೀಡದೇ ಮುನಿರತ್ನ ಮೌನವಾಗಿದ್ದರು ಎನ್ನಲಾಗಿದೆ. ಬಂಧನಕ್ಕೂ ಮುನ್ನ ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ವಿಡಿಯೋ ಹರಿಬಿಟ್ಟಿದ್ದ ಮುನಿರತ್ನ ನ್ಯಾಯಾಧೀಶರೆದುರು ಹಾಗೂ ಪೊಲೀಸರೆದುರು ಅದೇ ಮಾತುಗಳನ್ನಾಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ