Latest

BJP ಎಂಎಲ್ ಸಿ ಆರ್.ಶಂಕರ್ ಗೆ ಐಟಿ ಶಾಕ್

ಪ್ರಗತಿವಾಹಿನಿ ಸುದ್ದಿ; ಹಾವೇರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ವಿಧಾನಪರಿಷತ್ ಬಿಜೆಪಿ ಸದಸ್ಯ ಆರ್.ಶಂಕರ್ ಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

Home add -Advt

ಎಂಎಲ್ ಸಿ ಆರ್.ಶಂಕರ್ ಅವರ ಹಾವಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಡರಾತ್ರಿ ಈ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಬೀರೇಶ್ವರ ನಗರದಲ್ಲಿನ ಆರ್.ಶಂಕರ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ಆರ್.ಶಂಕರ್ ಅವರ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿವೆ.

ಆರ್.ಶಂಕರ್ ಭಾವಚಿತ್ರವಿರುವ ಸೀರೆ ಬಾಕ್ಸ್, ತಟ್ಟೆ, ಲೋಟಾ, ಎಲ್ ಕೆಜಿ ಹಾಗೂ ಪದವಿ ಮಕ್ಕಳಿಗೆ ಹಂಚಲು ತಂದಿದ್ದ ಶಾಲಾ ಬ್ಯಾಗ್ ಸೇರಿದಂತೆ ಹಲವು ವಸ್ತುಗಳು ದೊರೆತಿವೆ. ಸುಮಾರು 8 ಕೋಟಿ ರೂ ಮೌಲ್ಯದ ವಸ್ತುಗಳು ಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ.

Related Articles

Back to top button