ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹಿಳೆಯೊಬ್ಬರು ತಮ್ಮ ವಿರುದ್ಧ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕಲಬುರ್ಗಿ ಜಿಲ್ಲೆ ಸೇಡಂ ಬಿಜೆಪಿ ಶಾಸಕ ರಾಜ್ ಕುಮಾರ್ ಪಾಟೀಲ್ ತೇಲ್ಕೂರು, ಮಹಿಳೆ ಹಾಗೂ ಆಕೆಯ ಪತಿ ತನಗೆ ನಿರಂತರವಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದು, ಅವರ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು ನೀಡಿದ್ದೇನೆ ಎಂದರು.
ಮಹಿಳೆ ಹಾಗೂ ಆಕೆಯ ಪತಿ ತನಗೆ ಹಲವು ದಿನಗಳಿಂದ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ 2 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ನಾನು ಹೆಚ್ಚಿಗೆ ಮಾತನಾಡುವುದಿಲ್ಲ. ಪೊಲೀಸರಿಗೆ ಎಲ್ಲಾ ಮಾಹಿತಿ ನೀಡಿದ್ದೇನೆ. ಮಹಿಳೆ ಹಾಗೂ ಆಕೆ ಪತಿ ವಿರುದ್ಧ ಫೆ.5ರಂದೇ ದೂರು ದಾಖಲಿಸಿದ್ದೇನೆ ಎಂದರು.
ದೂರು ದಾಖಲಿಸಿದ ಹಿನ್ನೆಲೆಯಲ್ಲಿ ನಿನ್ನೆ ಮಹಿಳೆ ಹಾಗೂ ಆಕೆ ಪತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಕರೆ ತಂದು ವಿಚಾರಣೆ ನಡೆಸಿದ್ದಾರೆ. ನಾನೂ ಕೂಡ ಕಾನೂನು ಹೋರಾಟ ನಡೆಸಲು ಸಿದ್ಧ, ಸಾಮಾಜಿಕ ಜಾಲತಾಣ ಬಿಟ್ಟು ಮಹಿಳೆಯೂ ಕಾನೂನು ಹೋರಾಟ ನಡೆಸಲಿ. ಇದರ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆ ನಾನು ಯಾವುದೇ ಆರೋಪ ಮಾಡಲ್ಲ ಎಂದು ಕಣ್ಣೀರು ಹಾಕಿದರು.
ಶಾಸಕರಿಂದ ನನಗೆ ಮಗುವಾಗಿದೆ ಎಂದ ಮಹಿಳೆ!
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ