ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಸ್ಕೆಚ್ ಹಾಕಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದೆಲ್ಲ ರಾಜಕೀಯದಲ್ಲಿ ಇದ್ದಿದ್ದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಕಾಂಗ್ರೆಸ್ ಮುಖಂಡನಿಂದ ಸಂಚು ವಿಚಾರಕ್ಕೆ ಸಂಬಂಧಿಸಿದಂತೆ ನಾನು ವಿಡಿಯೋ ನೋಡಿಲ್ಲ, ವಿಡಿಯೋ ನೋಡಿ ಮಾತನಾಡುತ್ತೇನೆ. ಆರೋಪಕ್ಕೆ ಸಂಬಂಧಿಸಿದಂತೆ ಗೋಪಾಲಕೃಷ್ಣ ಜೊತೆ ಮಾತನಾಡಿದ್ದೇನೆ. ಇದರಲ್ಲಿ ನನ್ನ ತಪ್ಪಿಲ್ಲ, ನಾನು ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾರೆ. ಯಾರೇ ತಪ್ಪು ಮಾಡಿರಲಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಿ ಎಂದರು.
ಇನ್ನು ಎಲ್ಲಾ ರೌಡಿಗಳೂ ಎಸ್.ಆರ್.ವಿಶ್ವನಾಥ್ ಜೊತೆ ಇದ್ದಾರೆ. ಲಿಸ್ಟ್ ಬೇಕಾದರೂ ಕೊಡುತ್ತೇನೆ. ಇದೆಲ್ಲ ರಾಜಕೀಯದಲ್ಲಿ ಇದ್ದಿದ್ದೆ. ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲಿ ಎಂದು ಹೇಳಿದರು.
ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸ್ಕೆಚ್; ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಪೊಲೀಸ್ ವಶಕ್ಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ