ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಹಾಗೂ ವಿಶ್ವನಾಥ್ ಬೆಂಬಲಿಗ ದೇವರಾಜ್ ನನ್ನುಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಂಗ್ರೆಸ್ ಮುಖಂಡ ಎಂ.ಎನ್.ಗೋಪಾಲಕೃಷ್ಣ ಈ ಹಿಂದೆ ಯಲಹಂಕ ವಿಧಾನಸಭಾ ಕ್ಷೇತ್ರದಿಂದ ವಿಶ್ವನಾಥ್ ವಿರುದ್ಧ ಸ್ಪರ್ಧಿಸಿ ಎರಡು ಬಾರಿ ಸೋತಿದ್ದರು ಎನ್ನಲಾಗಿದೆ. ಗೋಪಾಲಕೃಷ್ಣ ಹಾಗೂ ದೇವರಾಜ್ ಅಲಿಯಾಸ್ ಕುಳ್ಳದೇವರಾಜ್, ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿ ಮಾತನಾಡುತ್ತಿರುವ ಸಂಭಾಷಣೆಯ ವಿಡಿಯೋ ಬಹಿರಂಗವಾಗಿದ್ದು, ಸಿಸಿಬಿ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಗೋಪಾಲಕೃಷ್ಣ ತನ್ನ ಮನೆಯಲ್ಲಿಯೇ 5 ತಿಂಗಳ ಹಿಂದೆ ದೇವರಾಜ್ ಜೊತೆ ಕೊಲೆ ಸಂಚು ರೂಪಿಸಿ ಮಾತನಾಡುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಒಂದು ಕೋಟಿ ಕೊಟ್ಟರೆ ಮುಗಿಸುವುದಾಗಿ ಮಾತನಾಡುತ್ತಿದ್ದು, ಮುಗಿಸಿದ್ರೆ 100 ಕೋಟಿ ಸಿಗುತ್ತೆ ಎನ್ನುವುದಾದರೆ ಮುಗಿಸೋಣ. ಆಂಧ್ರದಿಂದ ಶಾರ್ಪ್ ಶೂಟರ್ ತಂದು ಮುಗಿಸೋಣ ಎಂದು ಮಾತನಾಡಿಕೊಂಡಿದ್ದಾರೆ ಇಬ್ಬರ ಸಂಭಾಷಣೆ ವಿಡಿಯೋ ಇದೀಗ ಬಹಿರಂಗವಾಗಿದೆ.
ಲಸಿಕೆ ಪಡೆಯದವರಿಗೆ ಮಾತ್ರ ಸರ್ಕಾರಿ ಸೌಲಭ್ಯ ಎಂಬ ಶಿಫಾರಸ್ಸನ್ನು ಸರ್ಕಾರ ಒಪ್ಪಲು ಸಾಧ್ಯವಿಲ್ಲ – ಸುಧಾಕರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ