*ಕಾಂಗ್ರೆಸ್ ಪರವಾಗಿ ಬಿಜೆಪಿ ಶಾಸಕ ಸೋಮಶೇಖರ ಪ್ರಚಾರ: ನೋಟೀಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಸ್ವ ಪಕ್ಷದ ವಿರುದ್ಧವೇ ಮುನಿಸಿಕೊಂಡಿರುವ ಶಾಸಕ ಎಸ್ ಟಿ ಸೋಮಶೇಖರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಇದರಿಂದಾಗಿ ಗರಂ ಆಗಿರುವ ಬಿಜೆಪಿ ನಾಯಕರು ಸೋಮಶೇಖರ ವಿರುದ್ಧ ಸಭಾದ್ಯಕ್ಷರಿಗೆ ದೂರು ನೀಡಿದ್ದಾರೆ.
2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಹಾಗಾಗಿ ಅವರಿಗೆ ನೋಟಿಸ್ ನೀಡಿ, ಸಭಾದ್ಯಕ್ಷರಿಗೆ ದೂರು ನೀಡಲಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ ತಿಳಿಸಿದ್ದಾರೆ.
ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡದೆ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಸೋಮಶೇಖರ ಮಾಡುತ್ತಿರುವುದು ತಪ್ಪು, ಶೀಘ್ರವೇ ಅವರ ತಪ್ಪಿನ ಅರಿವು ಅವರಿಗೆ ಆಗಲಿದೆ. ಹೀಗೆ ಮುಂದುವರೆದು ಅವರು ಪಶ್ಚಾತಾಪ ಪಡಬೇಕಾಗುತ್ತದೆ. ಈಗಲೂ ಅವರಿಗೆ ತಮ್ಮ ತಪ್ಪು ತಿದ್ದಿಕೊಳ್ಳಲು ಅವಕಾಶ ಇದೆ ಎಂದು ಆರ್. ಅಶೋಕ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ