Latest

ಕಾರಿನಲ್ಲಿ ತೆರಳುತ್ತಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟ BJP ಶಾಸಕ

ಪ್ರಗತಿವಾಹಿನಿ ಸುದ್ದಿ; ಲಕ್ನೋ: ಬಿಜೆಪಿ ಶಾಸಕ ಅರವಿಂದ ಗಿರಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಲಖಿಂಪುರದಲ್ಲಿ ನಡೆದಿದೆ.

ಅರವಿಂದ ಗಿರಿ ತಮ್ಮ ಕಾರಿನಲ್ಲಿ ಲಕ್ನೋಗೆ ಹೋಗುತ್ತಿದ್ದಾಗ ಕಾರಿನಲ್ಲಿಯೇ ಹೃದಯಾಘಾತಕ್ಕೀಡಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.

ಗೋಲ ಗೋಕರನಾಥ ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅರವಿಂದ ಗಿರಿ ಅವರ ಅಕಾಲಿಕ ನಿಧನಕ್ಕೆ ಸಿಎಂ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ಸೂಚಿಸಿದ್ದಾರೆ.

ಪೊಲೀಸರಿಗೆ ಶರಣಾದ 5ನೇ ಆರೋಪಿ

https://pragati.taskdun.com/latest/murughashree-case5th-accusedsurrender-gangadharaiah/

Related Articles

Back to top button