Belagavi NewsBelgaum NewsKannada NewsKarnataka NewsLatest

*ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಅರಣ್ಯಾಧಿಕಾರಿಗಳು ಹಾಗೂ ಬಿಜೆಪಿ ಶಾಸಕರ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಹರೀಶ್ ಪೂಂಜಾ ವುರುದ್ಧ ಎಫ್ ಐ ಆರ್ ದಾಖಲಾಗಿದೆ.

ಚಾರ್ಮಡಿ ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ತೆರವು ಕಾರ್ಯಾಚರನೆ ವೇಳೆ ಅರಣ್ಯಾಧಿಕಾರಿಗಳು ಹಾಗೂ ಬಿಜೆಪಿ ಶಾಸಕ ಹರೀಶ್ ಪೂಂಜಾ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಹರೀಶ್ ಪೂಂಜಾ ಅರಣ್ಯಾಧಿಕಾರಿಗಳನ್ನು ಅವಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಕ್ಟೋಬರ್ 9 ರಂದು ಈ ಘಟನೆ ನಡೆದಿತ್ತು.

ಈ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಅರಣ್ಯಾಧಿಕಾರಿ ಕೆ.ಕೆ.ಜಯಪ್ರಕಾಶ್ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು ಶಾಸಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button