Latest

ಭೀಕರ ಅಪಘಾತ; ಹಿರಿಯ ಪತ್ರಕರ್ತ ಬಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಹಿರಿಯ ಪತ್ರಕರ್ತರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ವಿಜಯವಾಣಿ ಪತ್ರಿಕೆಯ ಮುಖ್ಯ ಉಪಸಂಪಾದಕರಾಗಿದ್ದ  ಗಂಗಾಧರಮೂರ್ತಿ (46) ಮೃತರು. ಇಂದು ಮಧ್ಯಾಹ್ನ ಟೌನ್ ಹಾಲ್ ಮುಂಭಾಗ ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ನಲ್ಲಿ ತೆರಳುತ್ತಿದ್ದ ಪತ್ರಕರ್ತ ಗಂಗಾಧರ್ ಮೂರ್ತಿ ಮೇಲೆ ಪಲ್ಟಿಯಾಗಿ ಬಿದ್ದಿದೆ.

ಲಾರಿ ಕೆಳಗೆ ಸಿಲುಕಿದ್ದ ಗಂಗಾಧರ್ ಮೂರ್ತಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳು ಗಂಗಾಧರ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಮೂಲತಃ ಶೃಂಗೇರಿಯವರಾಗಿದ್ದ ಅವರಿಗೆ ಪತ್ನಿ, ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಈಚೆಗಷ್ಟೆ ಬೆಂಗಳೂರಿನಲ್ಲಿ ಹೊಸ ಫ್ಲ್ಯಾಟ್ ಖರೀದಿಸಿ ಅವರು ಹೊಸ ಜೀವನ ಆರಂಭಿಸಿದ್ದರು.

Home add -Advt

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೂ ಕೊರೊನಾ ಸೋಂಕು

Related Articles

Back to top button