Latest

BJP ಶಾಸಕನ ಪುತ್ರನ ವಿರುದ್ಧ ಮತ್ತೆರಡು FIR ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಮಾಡಾಳ್ ವಿರುದ್ಧ ಮತ್ತೆರಡು ಎಫ್ ಐ ಆರ್ ದಾಖಲಾಗಿದೆ.

ಪಿಸಿ ಆಕ್ಟ್ ಅಡಿ ಲೋಕಾಯುಕ್ತ ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

Home add -Advt

ಮಾರ್ಚ್ 2ರಂದು ನಡೆದ ಲೋಕಾಯುಕ್ತ ಕಾರ್ಯಾಚರಣೆಯಲ್ಲಿ 2 ಕೋಟಿಗೂ ಅಧಿಕ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಕ್ರೆಸೆಂಟ್ ರಸ್ತೆಯ ಕಾಸಗಿ ಕಚೇರಿಯಲ್ಲಿ 1.60 ಲಕ್ಷ ರೂ ಪತ್ತೆ ಹಾಗೂ ಮಾಡಾಳ್ ಸಂಬಂಧಿ ಸುರೇಂದ್ರ ಬಳಿ 60 ಲಕ್ಷ ಹಣ ಪತ್ತೆ ಪ್ರಕರಣ ಸಂಬಂಧ ಪ್ರತ್ಯೇಕ ಎರಡು ಕೇಸ್ ದಾಖಲಾಗಿದ್ದು, ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Related Articles

Back to top button