LatestNationalPolitics

*ಬಿಜೆಪಿ ಶಾಸಕಿ ಮನೆ ಬಳಿ ಬಾಂಬ್ ಸ್ಫೋಟ: ಐವರು ಕಾರ್ಯಕರ್ತರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ನೂತನ ಶಾಸಕಿ ರತ್ನ ದೇಬನಾಥ್ ಅವರ ನಿವಾಸದ ಬಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಈ ಘಟನೆ ನಡೆದಿದೆ. ಪನಿಹಾಟಿ ಕ್ಷೇತ್ರದ ಬಿಜೆಪಿ ಶಾಸಕಿ ರತ್ನ ದೇಬನಾಥ್ ಅವರ ಮನೆ ಬಳಿ ಬಾಂಬ್ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರೆದಿದೆ. ಸಿಎಂ ಅಭ್ಯರ್ಥಿ ಬಿಜೆಪಿಯ ಸುವೆಂದು ಅಧಿಕಾರಿ ಅವರ ಪಿಎ ಚಂದ್ರನಾಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದ ಬೆನ್ನಲ್ಲೇ ಇದೀಗ ಬಿಜೆಪಿ ಶಾಸಕಿ ಮನೆ ಬಳಿ ಬಾಂಬ್ ಸ್ಫೋಟ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

Related Articles

Back to top button