Politics

*BJP ಎಂಎಲ್ ಸಿ ಎನ್.ರವಿಕುಮಾರ್ ಗೆ ತಾತ್ಕಾಲಿಕ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಕಲಬುರಗಿ ಜಿಲ್ಲಾಧಿಕಾರಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಎಂಎಲ್ ಸಿ ಎನ್.ರವಿಕುಮಾರ್ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಸದ್ಯಕ್ಕೆ ಬಂಧನ ಭೀತಿಯಿಂದ ಪಾರಾಗಿದ್ದಾರೆ.

ಕಲಬುರಗಿ ಡಿಸಿ ಪಾಕಿಸ್ತಾನದಿಂದ ಬಂದವರಂತೆ ಕಾಣುತ್ತಾರೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದ ಎನ್.ರವಿಕುಮಾರ್ ವಿರುದ್ಧ ಕಲಬುರಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಪ್ರಕರಣ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಲ್ಲಿದ್ದ ರವಿಕುಮಾರ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ತನ್ನ ವಿರುದ್ಧದ ಎಫ್ಐಆರ್ ರದ್ದು ಕೋರಿ ಹಾಗೂ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್, ರವಿಕುಮಾರ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲಿಸರಿಗೆ ಸೂಚಿಸಿದೆ. ಇನ್ನು ರವಿಕುಮಾರ್, ಪೊಲೀಸರ ವಿಚಾರಣೆಗೆ ಸಹಕರಿಸಬೇಕು ಎಂದು ಸೂಚಿಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button