Latest

MLC ಕಾರು ಡಿಕ್ಕಿ; ಬೈಕ್ ಸವಾರ ಗಂಭೀರ; ನೀನ್ಯಾವ ಸೀಮೆ ಎಂಎಲ್ ಸಿ…ಸಾರ್ವಜನಿಕರ ಆಕ್ರೋಶ

ಪ್ರಗತಿವಾಹಿನಿ ಸುದ್ದಿ; ಕೋಲಾರ: ಬಿಜೆಪಿ ಎಂ ಎಲ್ ಸಿ ಎನ್ ರವಿಕುಮಾರ್ ಅವರ ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರದ ಲಕ್ಷ್ಮೀಸಾಗರ ಗೇಟ್ ಬಳಿ ನಡೆದಿದೆ.

ಶಿವನಪುರದ ಗೋಪಾಲ್ (45) ಎಂಎಲ್ ಸಿ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿರುವ ಬೈಕ್ ಸವಾರ. ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಎಂ ಎಲ್ ಸಿ ಎನ್.ರವಿಕುಮಾರ್ ಅವರ ಕಾರು ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಗೋಪಾಲ್ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ರವಿಕುಮಾರ್ ಹಿಂದೇಟು ಹಾಕಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯದೇ ಬೇಜವಾಬ್ದಾರಿ ಮೆರೆದಿದ್ದಾರೆ. ಇದು ಸ್ಥಳದಲ್ಲಿದ್ದ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸದ ಎಂ ಎಲ್ ಸಿ ರವಿಕುಮಾರ್ ವಿರುದ್ಧ ಸಾರ್ವಜನಿಕರು ಕಿಡಿ ಕಾರಿದ್ದಾರೆ. ನೀನ್ಯಾವ ಸೀಮೆ ಎಂ ಎಲ್ ಸಿ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಜನರ ಆಕ್ರೋಶ ಕಂಡು ಎಂ ಎಲ್ ಸಿ ದಂಗಾಗಿ ಹೋಗಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಸ್ಥಳಕ್ಕೆ ವೇಮಗಲ್ ಠಾಣೆ ಪೊಲೀಸರು ಆಗಮಿಸಿ, ಸಾರ್ವಜನಿಕರನ್ನು ಸಮಾಧಾನಪಡಿಸಿ, ಗಾಯಾಳು ಗೋಪಾಲ್ ನನ್ನು ನರಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.

ಬಿಜೆಪಿಗರು ಮುಂದೆ ಉಗ್ರರನ್ನೂ ಸೇರಿಸಿಕೊಂಡು ಇವರೇ ನೋಡಿ ನಮ್ಮ ದೇಶದ ನಿಜವಾದ ದೇಶಪ್ರೇಮಿಗಳು ಎನ್ನುತ್ತಾರಾ?; ಹೆಚ್.ಸಿ.ಮಹದೇವಪ್ಪ

https://pragati.taskdun.com/h-c-mahadevappacongressbjptweet-warvidhanasabha-election/

Related Articles

Back to top button