Karnataka NewsPolitics

*BJP MLC ರವಿಕುಮಾರ್ ಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಎಂಎಲ್ ಸಿ ರವಿಕುಮಾರ್ ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂವಿಧಾನಿಕ ಪದ ಬಳಕೆ ಹಿನ್ನೆಲೆಯಲ್ಲಿ ಎಂಎಲ್ ಸಿ ರವಿಕುಮಾರ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್ಐ ಆರ್ ದಾಖಲಾಗಿತ್ತು. ಬಂಧನ ಭೀತಿಯಲ್ಲಿದ್ದ ರವಿಕುಮಾರ್ ತನ್ನ ವಿರುದ್ಧದ ಎಫ್ ಐ ಆರ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ನಿರೀಕ್ಷಣಾ ಜಾಮೀನಿಗೂ ಮನವಿ ಮಾಡಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಎಂಎಲ್ ಸಿ ರವಿಕುಮಾರ್ ವಿರುದ್ಧ ಬಲವಂತದ ಕ್ರಮ ಬೇಡ. ಜುಲೈ 8ರವರೆಗೆ ಬಂಧಿಸುವಂತಿಲ್ಲ ಎಂದು ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ. ಅಲ್ಲದೇ ರವಿಕುಮಾರ್ ವಿಚಾರಣೆಗೆ ಸಹಕರಿಸಬೇಕು ಎಂದು ತಿಳಿಸಿದ್ದು, ಅರ್ಜಿ ವಿಚಾರಣೆ ಜುಲೈ 8ಕ್ಕೆ ಮುಂದೂಡಿದೆ.

Home add -Advt


Related Articles

Back to top button