*ಪಕ್ಷದಲ್ಲಿ ಯಾರೂ ಹೇಳೋರಿಲ್ಲ, ಕೇಳೋರಿಲ್ಲ; ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಬಿಜೆಪಿ MLC*
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ವಿಳಂಬವಾಗುತ್ತಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ವಿರುದ್ಧ ಸ್ವಪಕ್ಷದ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದು, ಬಿಜೆಪಿ ನಾಯಕನಿಲ್ಲದ ಹಡಗಿನಂತಾಗಿದೆ ಎಂದು ಕಿಡಿಕಾರಿದ್ದಾರೆ.
ಸ್ವಪಕ್ಷದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿರುವ ಎಂಎಲ್ ಸಿ ಪ್ರದೀಪ್ ಶೆಟ್ಟರ್, ಲಿಂಗಾಯಿತರನ್ನು ತುಳಿದಿದ್ದೇ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಎಂದು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೀಪ್ ಶೆಟ್ಟರ್, ಬಿಜೆಪಿಯಲ್ಲಿ ಲಿಂಗಾಯಿತ ನಾಯಕರನ್ನು ತುಳಿಯುವ ಕೆಲಸವಾಗುತ್ತಿದೆ. ಇದರಿಂದ ಬೇಸರಗೊಂಡು ಲಿಂಗಾಯಿತ ನಾಯಕರು ಪಕ್ಷದಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಬಿ.ಎಸ್. ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದರು. ಇರುವ ಅಲ್ಪಸ್ವಲ್ಪ ಲಿಂಗಾಯಿತ ನಾಯಕರನ್ನೂ ಅವೈಡ್ ಮಾಡಿದರೆ ಬಿಜೆಪಿ ಕೆಟ್ಟಸ್ಥಿತಿಗೆ ಹೋಗಲಿದೆ ಎಂದು ಕಿಡಿಕಾರಿದರು.
ರಾಜ್ಯ ಬಿಜೆಪಿ ಉಸ್ತುವಾರಿಯನ್ನು ಬದಲಾಯಿಸಬೇಕು. ಲೋಕಸಭಾ ಚುನಾವಣೆಗೆ ಲಿಂಗಾಯಿತ ನಾಯಕರಿಗೆ ಹೆಚ್ಚು ಟಿಕೆಟ್ ಕೊಟ್ಟರೆ ಆಗಲಾದರೂ ಪಕ್ಷ ಗೆಲ್ಲುತ್ತದೆ ಎಂದರು.
ವಿಪಕ್ಷ ನಾಯಕನ ಆಯ್ಕೆ ವಿಳಮ್ಬವಾಗುತ್ತಿದೆ. ರಾಜ್ಯಾಧ್ಯಕ್ಷರ ಆಯ್ಕೆಯೂ ಆಗುತ್ತಿಲ್ಲ. ಬಿಜೆಪಿಯಲ್ಲಿ ಯಾರೂ ಹೇಳೋರಿಲ್ಲ, ಕೇಳೋರಿಲ್ಲ ಎಂಬಂತಾಗಿದೆ. ನಾಯಕತ್ವದ ಕೊರತೆ ಇದ್ದಂತಿದೆ. ನಾವು ಯಾರ ಬಳಿ ಸಮಸ್ಯೆ ಹೇಳಿಕೊಳ್ಳಬೇಕು? ವಿಪಕ್ಷ ನಾಯಕನ ಆಯ್ಕೆ ವಿಳಂಬಕ್ಕೆ ಕಾರಣವೇನು ಗೊತ್ತಾಗುತ್ತಿಲ್ಲ ಎಂದು ಸ್ವಪಕ್ಷದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
BJP MLC,Pradeep shettar,Reaction,hubli
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ