ಪ್ರಗತಿವಾಹಿನಿ ಸುದ್ದಿ; ಹಾವೇರಿ: ಚುನಾವಣೆ ವೇಳೆ ಮತದಾರರಿಗೆ ಆಮಿಷವೊಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ಆರ್.ಶಂಕರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ತಹಶೀಲ್ದಾರ್ ಗುರು ಬಸವರಾಜ ನೀಡಿದ ದೂರಿನ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಟೌನ್ ಠಾಣೆಯಲ್ಲಿ ಆರ್.ಶಂಕರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಮತದಾರರಿಗೆ ಕುಕ್ಕರ್, ಸೀರೆ ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಆರ್.ಶಂಕರ್ ವಿರುದ್ಧ ಕೇಳಿಬಂದಿದೆ. ಅಲ್ಲದೇ ಮಾರ್ಚ್ 14ರಂದು ರಾತ್ರಿ ಆರ್.ಶಂಕರ್ ಕಚೇರಿ ಮೇಲೆ ಹಾವೇರಿ ಎಸಿ, ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಸಿಕ್ಕ ಅಪಾರ ವಸ್ತುಗಳ ಮಾಹಿತಿಯನ್ನು ಕೋರ್ಟ್ ಗೆ ಸಲ್ಲಿಸಲಾಗಿತ್ತು. ಕೋರ್ಟ್ ಅನುಮತಿಯಂತೆ ಕಂದಾಯ ಇಲಾಖೆ ಅಧಿಕಾರಿಗಳು ಆರ್.ಶಂಕರ್ ವಿರುದ್ಧ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಆರ್.ಶಂಕರ್ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಚುನಾವಣೆ ಹೊತ್ತಲ್ಲಿ ಬಿಜೆಪಿ ಎಂಎಲ್ ಸಿಗೆ ಸಂಕಷ್ಟ ಎದುರಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ