ನಾನು ಎಲ್ಲಿಯೂ ಗಾಂಧಿ ಹೆಸರು ಹೇಳಿಲ್ಲ; ಕ್ಷಮೆ ಕೇಳುವ ಪ್ರಶ್ನೆಯಿಲ್ಲ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನಾನು ಎಲ್ಲಿಯೂ ಮಹಾತ್ಮಾ ಗಾಂಧಿ ಹೆಸರು ಹೇಳಿಲ್ಲ. ನಮ್ಮ ಸ್ವಾತಂತ್ರ್ಯ ಹೋರಾಟದ ನೈಜ ಪರಿಸ್ಥಿತಿಯನ್ನು ವಿವರಿಸಿದ್ದೆನೆ. ಆದರೆ ವಿಪಕ್ಷಗಳು ನಾನು ಗಾಂಧೀಜಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದೇನೆ ಎಂದು ವಿವಾದ ಸೃಷ್ಟಿಸುತ್ತಿದ್ದಾರೆ ಈ ಬಗ್ಗೆ ನಾನೂ ಏನೂ ಪ್ರತಿಕ್ರಿಯೆ ನೀಡಲ್ಲ ಎಂದು ಸಂಸದ ಅನಂತ ಕುಮಾರ್ ಹೆಗಡೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದು, ಕ್ಷಮೆ ಕೇಳುವ ಅಗತ್ಯವಿಲ್ಲ ಎಂದು ಹೇಳಿದರು.

ನಾನು ಯಾವುದೇ ಪಕ್ಷ ಅಥವಾ ವ್ಯಕ್ತಿಯನ್ನು ಉದ್ದೇಶಿಸಿ ಮಾತನಾಡಿರಲಿಲ್ಲ. ನಮ್ಮ ಸ್ವಾತಂತ್ರ್ಯ ಹೋರಾಟ ಹೇಗಿತ್ತು ಎಂಬುದನ್ನು ಹೇಳಿದ್ದೆ. ನನ್ನ ಭಾಷಣ ಈಗಲೂ ಯೂಟ್ಯೂಬ್ ನಲ್ಲಿ ಲಭ್ಯವಿದೆ. ಯಾರು ಬೇಕಾದರೂ ಕೇಳಬಹುದು. ನಾನು ಗಾಂಧಿ ಮತ್ತು ನೆಹರು ಕುರಿತು ಒಂದೇ ಒಂದು ಪದವನ್ನೂ ಬಳಕೆ ಮಾಡಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬಂದ ವರದಿಗಳು ತಪ್ಪು, ಇದರಲ್ಲಿ ವಿವಾದದ ಪ್ರಶ್ನೆಯೇ ಇಲ್ಲ. ಹೀಗಿರುವಾಗ ಕ್ಷಮೆ ಏಕೆ ಕೇಳಬೇಕು ಎಂದು ಪ್ರೆಶ್ನಿಸಿದರು.

ಇನ್ನು ಹೈಕಮಾಂಡ್ ನೀಡಿರುವ ನೋಟಿಸಿಗೆ ಉತ್ತರ ನೀಡಿದ್ದೇನೆ. ಮುಂದಿನದನ್ನು ಹೈಕಮಾಂಡ್ ನಿರ್ಧರಿಸಲಿ. ನಾನು ನನ್ನ ಹೇಳಿಕೆಗೆ ಬದ್ದವಾಗಿರುತ್ತೇನೆ ಎಂದು ಹೇಳಿದ್ದಾರೆ.

Home add -Advt

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button