Cancer Hospital 2
Beereshwara 36
LaxmiTai 5

*ಬಿಜೆಪಿ ಸಂಸದನ ಮಗನ ಎಸ್ ಯುವಿ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಮಗ ಕರಣ್ ಭೂಷಣ್ ಎಸ್ ಯುವಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗೋಂಡಾದಲ್ಲಿ ನಡೆದಿದೆ.

ರೆಹಾನ್ (17) ಹಾಗೂ ಶಹಜಾನ್ (24) ಮೃತ ಯುವಕರು. ಔಷಧಿ ಖರೀದಿಗೆಂದು ಬೈಕ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಎಸ್ ಯುವಿ ಬೈಕ್ ಗೆ ಡಿಕ್ಕಿ ಹೊಡೆದಿದೆ.

Emergency Service

ಅಪಘತದ ರಭಸಕ್ಕೆ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ಸಂಬಂಧ ಎಸ್ಯುವಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಅಪಘಾತದ ವೇಳೆ ಕಾರಿನಲ್ಲಿ ಸಂಸದರ ಪುತ್ರ ಕರಣ್ ಭೂಷಣ್ ಇದ್ದರೆ ಎಂಬುದು ಸ್ಪಷ್ಟವಾಗಿಲ್ಲ.

Bottom Add3
Bottom Ad 2