Kannada NewsLatestNationalPolitics

*ಬರಿಗೈಯಲ್ಲಿ ಶೌಚಾಲಯವನ್ನು ಸ್ವಚ್ಚಗೊಳಿಸಿದ ಬಿಜೆಪಿ ಸಂಸದ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಸಂಸದರೊಬ್ಬರು ಬರಿಗೈಯಲ್ಲಿ ಶೌಚಾಲಯವನ್ನು ಸ್ವಚ್ಛಗೊಳಿಸಿರುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಸದಾಕಾಲ ರಾಜಕೀಯವಾಗಿ ಸುದ್ದಿಯಲ್ಲಿರುತ್ತಿದ್ದ ಸಂಸದ ಜನಾರ್ಧನ ಮಿಶ್ರಾ ಈ ಬಾರಿ ಬರಿಗೈಯಲ್ಲಿ ಟಾಯ್ಲೆಟ್ ಕ್ಲೀನ್ ಮಾಡಿ ಭಾರಿ ಸುದ್ದಿಯಾಗಿದ್ದಾರೆ. ಇವರು ಕೈಯಿಂದ ಶೌಚಾಲಯವನ್ನು ಸ್ವಚ್ಛ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಧ್ಯಪ್ರದೇಶದ ರೇವಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ಧನ ಮಿಶ್ರಾ ಅವರು ಶೌಚಾಲಯವನ್ನು ಬರಿಗೈಯಿಂದ ಸ್ವಚ್ಛಗೊಳಿಸಿದ್ದಾರೆ. ವಿಡಿಯೋದಲ್ಲಿ ಜನಾರ್ದನ ಮಿಶ್ರಾ ಅವರು ಯಾವುದೇ ಸ್ವಚ್ಛತಾ ಕಾರ್ಮಿಕರ ಸಹಾಯ ಪಡೆಯದೆ, ಬರಿಗೈಯಲ್ಲೇ ಶೌಚಾಲಯದ ಸೀಟ್ ಸ್ವಚ್ಛಗೊಳಿಸುತ್ತಿರುವುದು ಕಂಡುಬಂದಿದೆ.

ಸಂಸದರು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಲು, ರೀಲ್ಸ್ ಗಾಗಿ ಈ ರೀತಿ ಮಾಡಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಜನಾರ್ದನ ಮಿಶ್ರಾ ಈ ಹಿಂದೆಯೂ ಇದೇ ರೀತಿ ಟಾಯ್ಲೆಟ್ ಸ್ವಚ್ಛಗೊಳಿಸಿ ಸುದ್ದಿಯಾಗಿದ್ದರು.

ಸ್ವಚ್ಛತಾ ಅಭಿಯಾನದ ವೇಳೆ ಸ್ವತಃ ಶೌಚಾಲಯಗಳನ್ನು ಸ್ವಚ್ಛಗೊಳಿಸಿ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಇಂತಹ ಕಾರ್ಯಗಳಲ್ಲಿ ಭಾಗವಹಿಸುತ್ತಿರುವುದಾಗಿ ಅವರು ಹೇಳಿದ್ದರು.

Related Articles

Back to top button