
ಪ್ರಗತಿವಾಹಿನಿ ಸುದ್ದಿ: ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಂಸದ ರಮೇಶ್ ಜಿಗಜಿಣಗಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಮೇಶ್ ಜಿಗಜಿಣಗಿ ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತಿದ್ದರು. ಈ ವೇಳೆ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ.
ಕೂಡಲೇ ಅವರನ್ನು ಬಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್ ನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ