*ಬಿಜೆಪಿ ಸಂಸದ ಅಸ್ವಸ್ಥ; ಆಸ್ಪತ್ರೆಗೆ ದಾಖಲು*
ಪ್ರಗತಿವಾಹಿನಿ ಸುದ್ದಿ: ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಸದ ರಮೇಶ್ ಜಿಗಜಿಣಗಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಮೇಶ್ ಜಿಗಜಿಣಗಿ ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತಿದ್ದರು. ಈ ವೇಳೆ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಬಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್ ನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. *ಹನುಮಧ್ವಜ ತೆರವುಗೊಳಿಸಿ ರಾಷ್ಟ್ರಧ್ವಜ ಹಾರಿಸಿದ ಪೊಲೀಸರು*
Copy and paste this URL into your WordPress site to embed
Copy and paste this code into your site to embed