Latest

*BJP ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅಧಿಕಾರಾವಧಿ ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿ ವಿಸ್ತರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ನವದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿಯನ್ನು ಜೂನ್ 2024ರವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದರು. 2024ರ ಲೋಕಸಭಾ ಚುನಾವಣೆಯನ್ನು ನಡ್ಡಾ ನೇತೃತ್ವದಲ್ಲಿಯೇ ಎದುರಿಸಲಾಗುವುದು. ನಡ್ಡಾ ನೇತೃತ್ವದಲ್ಲಿ ಪಕ್ಷ ಸಂಘಟನೆ ಬಲವರ್ಧನೆಯಾಗಿದೆ ಎಂದು ತಿಳಿಸಿದರು.

ನವದೆಹಲಿಯಲ್ಲಿ ಎರಡು ದಿನಗಳ ಕಾಲ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತು ಚರ್ಚೆ ನಡೆಯಿತು. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಯಾವೆಲ್ಲ ಯೋಜನೆಗಳನ್ನು ರೂಪಿಸಬೇಕು ಎಂಬ ನಿಟ್ಟಿನಲ್ಲಿ ಸಮಾಲೋಚನೆ ನಡೆಸಲಾಯಿತು.

ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ.ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಿದ್ದರು.

*ವಿವಾದ ಸೃಷ್ಟಿಸಿದ ಬಿ.ಕೆ.ಹರಿಪ್ರಸಾದ್ ಹೇಳಿಕೆ*

https://pragati.taskdun.com/b-k-hariprasadprajadwanicongresshosapetevijayanagara/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button