
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಹುದ್ದೆಯ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಈ ಬಗ್ಗೆ ಬಿಜೆಪಿ ಅಧಿಕೃತವಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹುದ್ದೆಯ ಚುನಾವಣೆಗೆ ಜನವರಿ 19ರಂದು ನಾಮಪತ್ರ ಸಲ್ಲಿಕೆ ನಡೆಯಲಿದೆ. ಜನವರಿ 20ರಂದು ಹೊಸ ಅಧ್ಯಕ್ಷರ ಹೆಸರನ್ನು ಅನೌಪಚಾರಿಕವಾಗಿ ಘೋಷಿಸಲಾಗುವುದು ಎಂದು ತಿಳಿದುಬಂದಿದೆ.
ಬಿಜೆಪಿಯ ನಿತಿನ್ ನಬಿನ್ ಅವರನ್ನು ಹಂಗಾಮಿ ರಾಷ್ಟ್ರಾಧ್ಯಕ್ಷರನ್ನಾಗಿ ಬಿಜೆಪಿ ಆಯ್ಕೆ ಮಾಡಿದ್ದು, ನಿತಿನ್ ನಬಿನ್ ಅವರೇ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗುವುದು ಖಚಿತ ಎಂದು ಹೇಳಲಾಗುತ್ತಿದೆ. ಜನವರಿ 20ರಂದು ಅಧಿಕೃತವಾಗಿ ಹೆಸರು ಘೋಷಣೆಯಾಗಲಿದೆ.



