ಪ್ರಗತಿವಾಹಿನಿ ಸುದ್ದಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ವಾಪಾಸ್ ಪಡೆಯಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿರುವ ಕ್ರಮ ಖಂಡಿಸಿರುವ ವಿಪಕ್ಷ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಬಿಜೆಪಿ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ನಾಯಕರ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆಯಲು ಮುಂದಾಗಿರುವ ಸರ್ಕಾರದ ನಿರ್ಧಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.
ಈ ವೇಳೆ ಪರಿಷತ್ ಸದಸ್ಯ ಸಿ.ಟಿ.ರವಿ, ಮಾಜಿ ಸಚಿವ ಡಾ.ಅಶ್ವತ್ಥನಾರಾಯಣ ಮೊದಲಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ