
ಪ್ರಗತಿವಾಹಿನಿ ಸುದ್ದಿ: ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಬಜಪೆಯ ಕಿನಿಪದವು ಸಮೀಪ ಸುಹಾಸ ಶೆಟ್ಟಿ ಕಾರನ್ನು ಅಡ್ಡಗಟ್ಟಿ ಭೀಕರವಾಗಿ ಕೊಲೆಗೈದಿದ್ದ ಆರೋಪಿಗಳ ಭೀಕರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ದೃಶ್ಯಗಳ ಆಧಾರದ ಮೇಲೆ ತನಿಖೆ ಆರಂಭಿಸಿದ್ದ ಪೊಲೀಸರ ತಂಡ ಮಂಗಳೂರಿನಲ್ಲಿ ಅಡಗಿ ಕುಳಿತಿದ್ದ 8 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಇನ್ನು ಗೃಹಸಚಿವ ಪರಮೇಶ್ವರ್ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದು ಘಟನೆಯ ಸಂಪೂರ್ಣ ಮಾಹಿತಿ ಪಡೆಯಲಿದ್ದಾರೆ. ಆ ಬಳಿಕ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ ಅಗರ್ವಾಲ್ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.