Karnataka NewsPolitics

*ಸರ್ಕಾರ ಬೀಳಿಸಲು ಶಾಸಕರಿಗೆ 50 ರಿಂದ 100 ಕೋಟಿ ಆಮಿಷ ಹೇಳಿಕೆ; ಕಾಂಗ್ರೆಸ್ ಶಾಸಕನ ವಿರುದ್ಧ ಬಿಜೆಪಿ ದೂರು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಿಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೇರಿದಂತೆ ಬಿಜೆಪಿಯ ಪ್ರಮುಖರು ಶಾಸಕರಿಗೆ 50 ರಿಂದ 100 ಕೋಟಿ ಆಮಿಷವೊಡ್ಡಿದ್ದಾರೆಂದು ಅಪಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಶಾಸಕ ರವಿಕುಮಾರ ಗೌಡ (ರವಿ ಗಣಿಗ) ವಿರುದ್ಧ ಬಿಜೆಪಿ ದೂರು ದಾಖಲಿಸಿದೆ.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಭಾನುವಾರ ಸಂಜೆ ಕಾಂಗ್ರೆಸ್ ಶಾಸಕ ರವಿಕುಮಾರ ವಿರುದ್ಧ ದೂರು ನೀಡಿದ್ದಾರೆ.

ಕಾಂಗ್ರೆಸ್ ಶಾಸಕ ರವಿಕುಮಾರ ಗೌಡ (ರವಿ ಗಣಿಗ) ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ನಾಲ್ಕಾರು ಮುಖಂಡರು ಕಾಂಗ್ರೆಸ್ ಸರ್ಕಾರ ಬೀಳಿಸಲು ಶಾಸಕರಿಗೆ 50 ರಿಂದ 100 ಕೋಟಿ ರೂ. ಹಣದ ಆಮಿಷವೊಡ್ಡುತ್ತಿದ್ದಾರೆ ಎಂಬುದು ಶುದ್ಧ ಸುಳ್ಳು ಎಂದು ರಾಜೀವ್ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಶಾಸಕ ರವಿಕುಮಾರ ರಾಜಕೀಯ ದುರುದ್ದೇಶದಿಂದ ನಿರಾಧಾರವಾಗಿ ಹೀಗೆ ಆರೋಪ, ಅಪಪ್ರಚಾರದಲ್ಲಿ ತೊಡಗಿದ್ದಾರೆ.

Home add -Advt

ತೇಜೋವಧೆ ಯತ್ನ:

ಸಚಿವ ಪ್ರಲ್ಹಾದ ಜೋಶಿ ಮತ್ತು ಬಿಜೆಪಿ ನಾಯಕರ ತೇಜೋವಧೆ ಮಾಡುವ ದುರುದ್ದೇಶದಿಂದ ಶಾಸಕ ರವಿಕುಮಾರ ಹೀಗೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜೀವ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್ ಶಾಸಕ ರವಿಕುಮಾರ ಅವರ ಈ ಹೇಳಿಕೆ ಭ್ರಷ್ಟಾಚಾರ ತಡೆ ಕಾಯ್ದೆ ವಿರುದ್ಧವಾಗಿದ್ದು, ಅಲ್ಲದೇ, ಬಿಜೆಪಿ ಬದ್ಧತೆಗೆ ಧಕ್ಕೆ ತರುವಂತಿದೆ. ಭ್ರಷ್ಟಾಚಾರಕ್ಕೆ ಪ್ರೇರಣೆ ನೀಡುವಂತಿದೆ. ಭಾರತೀಯ ನ್ಯಾಯ ಸಂಹಿತೆ ಕಾಯ್ದೆಯಡಿ ಇದು ಅಪರಾಧವಾಗಿದ್ದರಿಂದ ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಿದ್ದಾರೆ.

Related Articles

Back to top button