Latest

ಬೆಂಗಳೂರು ಬಿಜೆಪಿ ಕಾರ್ಯಾಲಯದಲ್ಲಿ ಶ್ಯಾಮ್ ಪ್ರಸಾದ್ ಮುಖರ್ಜಿಗೆ ನಮನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:

ಜನಸಂಘದ ಸ್ಥಾಪಕ, ರಾಜಕೀಯ ಆದರ್ಶವಾದಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ 66ನೇ ಬಲಿದಾನ ದಿನದ ಅಂಗವಾಗಿ ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಡಾ. ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ನಮನ ಸಲ್ಲಿಸಿದರು.

Home add -Advt

ನಂತರ ಡಾ.ಮುಖರ್ಜಿ ಅವರು ರಾಜಕೀಯಕ್ಕೆ ಬೆಳೆದು ಬಂದ ಜೀವನ ಚರಿತ್ರೆ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕರಾದ ಗೋವಿಂದ ಕಾರಜೋಳ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಮಹಾಂತೇಂಶ ಕವಟಗಿಮಠ, ರುದ್ರೇಗೌಡ, ರಾಜ್ಯ ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ ಗಣೇಶ ಯಾಜಿ ಹಾಗೂ ಮಲ್ಲೇಶ್ವರಂ ಮಂಡಲ ಬಿಜೆಪಿ ಅಧ್ಯಕ್ಷ ಕೇಶವ ಐತಾಳ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಗಿರೀಶ ದೇಶಭಕ್ತಿ ಗೀತೆ ಹಾಡಿದರು.

Related Articles

Back to top button