ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿದೆ. ದೇಶದಲ್ಲಿ ಇನ್ನೂ 6 ಹಂತದ ಮತದಾನ ಬಾಕಿ ಇದ್ದು, ಜೂನ 6 ರಂದು ಅಂತಿಮ ಫಲಿತಾಂಶ ಹೊರ ಬರಲಿದೆ. ಆದರೆ ಫಲಿತಾಂಶಕ್ಕೂ ಮುಂಚೆ ಬಿಜೆಪಿ ತನ್ನ ಖಾತೆ ತೆರೆದಿದೆ.
ಹೌದು, ಗುಜರಾತನ ಸೂರತ್ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆ ಆಗಿ ಗೆಲುವು ಸಾಧಿಸಿದ್ದಾರೆ. ಸೂರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ನಾಮಪತ್ರ ತಿರಸ್ಕೃತವಾಗಿದ್ದು, ಅದರ ನಂತರ ಎಲ್ಲಾ ಸ್ವತಂತ್ರ ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಹೀಗಾಗಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅನುಮೋದಕರ ಸಹಿಯನ್ನು ನಕಲು ಮಾಡಲಾಗಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತವಾಗಿದೆ.
ಸೂರತ್ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧದ 8 ಅಭ್ಯರ್ಥಿಗಳ ಪೈಕಿ 7 ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ. ಹಾಗಾಗಿ ಬಿಜೆಪಿಯ ಮುಖೇಶ್ ದಲಾಲ್ ಅವರನ್ನು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ