Kannada NewsKarnataka NewsNationalPolitics

*ಅಧಿವೇಶನದ ಮೊದಲ ದಿನವೆ ಸರ್ಕಾರದ ವಿರುದ್ಧ ಬಿಜೆಪಿ ಪೋಸ್ಟರ್ ವಾರ್*

ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಮೊದಲ ದಿನದ ವಿಧಾನ ಮಂಡಳ ಅಧಿವೇಶನ ಆರಂಭ ಆಹಿದ್ದು, ವಾಲ್ಮೀಕಿ ನಿಗಮದಲ್ಲಿ ಅಕ್ರಮ ವಿಚಾರವಾಗಿ ಸರ್ಕಾರದ ವಿರುದ್ಧ ಪ್ಲೇ ಕಾರ್ಡ್ ಹಿಡಿದು ಬಿಜೆಪಿ ಪ್ರತಿಭಟನೆ ನಡೆಸಿದೆ.

ಆ‌ರ್.ಅಶೋಕ್, ವಿಜಯೇಂದ್ರ, ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ, ಅರವಿಂದ್ ಬೆಲ್ಲದ್, ವಿಶ್ವನಾಥ್ ಸೇರಿದಂತೆ ಬಿಜೆಪಿ ಶಾಸಕರು ಪರಿಷತ್‌ ಸದಸ್ಯರು ಭಾಗಿಯಾಗಿದ್ದಾರೆ.

ಸದನದ ಒಳಗೆ ಪ್ರತಿಭಟನೆಗೆ ಮುಂದಾದ ಬಿಜೆಪಿ ನಾಯಕರು. ಮುಖ್ಯ ದ್ವಾರದಲ್ಲೇ ಬಿಜೆಪಿ ಶಾಸಕರು ಪೋಸ್ಟರ್ ಗಳನ್ನ ಹಿಡಿದು ಪ್ರವೇಶಿಸಿ, ದದ್ದಲ್ ಅವರನ್ನ ಹುಡುಕಿ ಕೊಡಿ ಎಂದು ಘೋಷಣೆ ಕೂಗಿದರು. ನಂತರ ಪೊಲೀಸರು ಶಾಸಕರ ಬಳಿ ಇದ್ದ ಪ್ಲೇ ಕಾರ್ಡ್ ನ್ನು ವಶಕ್ಕೆ ಪಡೆದರು.

ಪಾದಯಾತ್ರೆ ನಡೆಸಲು ಬಿಜೆಪಿ ನಾಯಕರು ಸಿದ್ಧತೆ ನಡೆಸಿದ್ದು, ಅಧಿವೇಶನ ಆರಂಭಕ್ಕೂ ಮೊದಲು ಬಿಜೆಪಿ ನಾಯಕರು ಶಾಸಕರ ಭವನದಿಂದ ವಿಧಾನಸೌಧದವರೆಗೂ ಪಾದಯಾತ್ರೆ ಹಮ್ಮಿಕೊಂಡಿದೆ.

Home add -Advt

ವಿಪರ್ಯಾಸವೆಂದರೆ, ಕೆಲವೇ ಕ್ಷಣಗಳಲ್ಲಿ ದದ್ದಲ್ ವಿಧಾನಸೌಧದಲ್ಲಿ ಹಾಜರಾದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button