ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ, ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ ಹಾಗೂ ಬೆಳಗಾವಿ ಗ್ರಾಮಾಂತರ ಮಂಡಳಗಳ ವತಿಯಿಂದ ಪ್ರತಿಭಟನೆ ನಡೆಯಲಿದೆ.
ಬುಧವಾರ ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಜಿಲ್ಲಾಧಿಕಾರಿಗಳಿಗೆ ಹಿಂದೂ ವಿರೋಧಿ ನೀತಿಯನ್ನು ತೋರಿರುವ ಕಾಂಗ್ರೆಸ್ಸಿಗರ ಧೋರಣೆಯನ್ನು ಖಂಡಿಸಿ ಮನವಿ ನೀಡಲಾಗುವುದು ಎಂದು ಮಹಾನಗರ ಅಧ್ಯಕ್ಷ ಅನಿಲ ಬೆನಕೆ ತಿಳಿಸಿದ್ದಾರೆ.
.
https://pragati.taskdun.com/politics/what-is-there-to-discuss-cm-gave-a-reply-to-the-satish-jarakiholi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ