Belagavi NewsBelgaum NewsKannada NewsKarnataka NewsPolitics

*ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ  ಪ್ರತಿಭಟನೆ* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭಯೋತ್ಪಾದಕ ಎಂದು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪ್ರತಿಭಟಿಸಿದರು.

ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಬೆಳಗಾವಿ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ 30 ನಿಮಿಷಕ್ಕೂ ಹೆಚ್ಚು ಸಮಯ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಯುವ ಮೋರ್ಚಾ ಗ್ರಾಮಾಂತರ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಮಹಾನಗರ ಜಿಲ್ಲಾಧ್ಯಕ್ಷರಾದ ಮಹಾದೇವ ಧರೆನ್ನವರ, ಮುಖಂಡರಾದ ಮುರಘೇಂದ್ರಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಆನಂದ ಅತ್ತುಗೋಳ, ಗುರು ಹಿರೇಮಠ, ಜಿಲ್ಲಾ ಉಪಾಧ್ಯಕ್ಷರಾದ ಪಂಡಿತ್ ಓಗಲೆ, ಶಿವಾನಂದ ಕಮತೆ, ಕೃಷ್ಣ ಪಾಟೀಲ್, ಈರಣ್ಣ ಅಂಬಲಿ, ರಾಜಶೇಖರ ಡೋಣಿ, ಪ್ರಸಾದ ದೇವರಮನಿ, ಶಿಲ್ಪಾ ಕೆಕರೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Home add -Advt

Related Articles

Back to top button