
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ರಫೇಲ್ ಯುದ್ದ ವಿಮಾನ ಖರೀದಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಷ್ಟ್ರದ ಮತ್ತು ಸರ್ವೋಚ್ಛ ನ್ಯಾಯಾಲಯದ ದಾರಿ ತಪ್ಪಿಸುವ ಯತ್ನ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಭೇಷರತ್ ಕ್ಷಮೆ ಯಾಚನೆಗೆ ಆಗ್ರಹಿಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಮಹಾನಗರ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು.
ಲೀನಾ ಟೋಪಣ್ಣವರ್, ಶ್ರೀನಿವಾಸ ಬಿಸನಕೊಪ್ಪ, ಹನುಮಂತ ಕಾಗಲಕರ್, ಆರತಿ ಪಾಟೋಳೆ ಮೊದಲಾದವರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ