*ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆ ವಾಪಸ್ ಪಡೆಯುವಂತೆ ಬಿಜೆಪಿ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲಿ ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆ ಜಾರಿಗೆ ತಂದಿರುವುದನ್ನು ವಿರೋಧಿಸಿ, ವಾಪಸ್ ಪಡೆಯುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿಯ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆಯನ್ನು ನಡೆಸಲಾಗಿದ್ದು, ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆ ಸಂವಿಧಾನದ ವಿರುದ್ಧವಾಗಿರೋ ಕಾಯ್ದೆ, ಕಾಂಗ್ರೆಸ್ ಸರ್ಕಾರ ನಾಗರಿಕ ಹಕ್ಕುಗಳನ್ನು ಕಿತ್ತುಕೊಳ್ಳುವ ಕೆಲಸವನ್ನು ಮಾಡುತ್ತಿದೆ ಎಂದು ಕಿಡಿಕಾರಿದೆ.
ಕಾಂಗ್ರೆಸ್ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿದುಕೊಳ್ಳುವ ಕೆಲಸವನ್ನು ಮಾಡುತ್ತಿದೆ, ಇದು ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಕಾಯ್ದೆ ಆಗಿದೆ. ದ್ವೇಷ ಭಾಷಣಕ್ಕೆ ಕಾಂಗ್ರೆಸ್ ಸರ್ಕಾರ ನೀಡಿರುವ ವ್ಯಾಖ್ಯಾನವೂ ಅಸ್ಪಷ್ಟವಾಗಿದೆ ಎಂದು ಬಿಜೆಪಿ ಆಕ್ರೋಶ ಹೊರಹಾಕಿದೆ.
ಕಾಂಗ್ರೆಸ್ ನ ಈ ಕಾರ್ಯದಿಂದಾಗಿ ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿಯಾಗಿದೆ. ಜನ ಸಾಮಾನ್ಯರನ್ನೂ ಅಪರಾಧ ಮಾಡುವ ಕಾಯ್ದೆ ಆಗಿದೆ. ಹಾಗಾಗಿ ದ್ವೇಷ ಭಾಷಣ ಕಾಯ್ದೆ ವಾಪಸ್ ಪಡೆಯಬೇಕೆಂದು ಡಿಸಿ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ ಎಂದು ಪ್ರತಿಭಟನೆಕಾರರು ಹೇಳಿದರು.



