ಪ್ರಗತಿವಾಹಿನಿ ಸುದ್ದಿ; ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಹೌರಾದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದು, ಹೌರಾದಲ್ಲಿ ಬಿಜೆಪಿ ಕಾರ್ಯಕರ್ತರ ರ್ಯಾಲಿ ತಡೆಗೆ ಮುಂದಾಗುತ್ತಿದ್ದಂತೆ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.
ಹೌರಾದಲ್ಲಿ ಮೂರು ಮಾರ್ಗಗಳಿಂದ ಆಗಮಿಸಿದ ಪ್ರತಿಭಟನಾಕಾರರನ್ನು ರೈಲು ನಿಲ್ದಾಣ, ಹೌರಾ ಸೇತುವೆ ಬಳಿ ಬ್ಯಾರಿಕೆಡ್ಗಳನ್ನು ಹಾಕಿ ಪೊಲಿಸರು ತಡೆಯಲು ಯತ್ನಿಸಿದ್ದಾರೆ. ಈ ವೇಳೆ ಪೊಲಿಸರು ಹಾಗೂ ಪ್ರತಿಭಟನಾಕಾರರ ನಡುವೆ ಸಂಘರ್ಷ ನಡೆದಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಪೊಲೀಸರ ಲಾಠಿ ಏಠಿಗೆ ಬಿಜೆಪಿಯ ಹಲವು ಕಾರ್ಯಕರ್ತರು ಕುಸಿದು ಬಿದ್ದಿದ್ದಾರೆ. ಇದರಿಂದ ಪೊಲೀಸರ ವಿರುದ್ಧ ಸಿಡಿದೆದ್ದ ಉದ್ರಿಕ್ತರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಬಿಜೆಪಿ ಕಾರ್ಯಕರ್ತರ ಮೇಲೆ ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಹೌರಾದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಮತ್ತೊಂದೆಡೆ ಪ್ರತಿಭಟನೆ ನಡೆಸುತ್ತಿದ್ದ ಸುವೆಂದು ಅಧಿಕಾರಿ, ರಾಹುಲ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು, ದೆಹಲಿ ಸೇರಿ 33 ಸ್ಥಳಗಳ ಮೇಲೆ CBI ದಾಳಿ
https://pragati.taskdun.com/latest/sub-inspector-recruitment-scamcbi-raid33-place/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ