Kannada NewsKarnataka NewsLatestPolitics
ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು*–
“ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಎಲ್ ಪಿಜಿ ಹಾಗೂ ಇಂಧನ ತೈಲಗಳ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ರಾಜ್ಯದಲ್ಲಿ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದು, ಇವರಿಗೆ ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿ ಕಪಾಳಮೋಕ್ಷ ಮಾಡಿದೆ. ಬಿಜೆಪಿ ನಾಯಕರು ತಮ್ಮ ಆಕ್ರೋಶವನ್ನು ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿಸಲಿ ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.