*ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸುವಂತೆ ಶಾಸಕ ಸುನೀಲ್ ಕುಮಾರ್ ಮನವಿ* *ಪ್ರಗತಿವಾಹಿನಿಗೆ ಖಚಿತಪಡಿಸಿದ ಮಾಜಿ ಸಚಿವ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿಯಲ್ಲಿ ಒಂದೆಡೆ ಬಣ ಬಡಿದಾಟ ಜೋರಾಗಿದ್ದರೆ ಮತ್ತೊಂದೆಡೆ ರಾಜ್ಯ ಪ್ರಧಾನಕಾರ್ಯದರ್ಶಿ ಹುದ್ದೆಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕಾರ್ಕಳ ಶಾಸಕ ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಮನವಿ ಮಾಡಿರುವ ಸುನೀಲ್ ಕುಮಾರ್, ಪಕ್ಷದ ಹುದ್ದೆಯಿಂದ ತಮ್ಮನ್ನು ಬಿಡುಗಡೆ ಮಡುವಂತೆ ಕೋರಿದ್ದಾರೆ. ತಮ್ಮ ನಿರ್ಧಾರಕ್ಕೆ ಬಣ ಬಡಿದಾಟ ಕಾರಣವಲ್ಲ. ವೈಯಕ್ತಿಕ ಕಾರಣಕ್ಕೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಬೇಕು ಎಂದು ಕೋರಿರುವುದಾಗಿ ಸುನೀಲ ಕುಮಾರ … Continue reading *ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸುವಂತೆ ಶಾಸಕ ಸುನೀಲ್ ಕುಮಾರ್ ಮನವಿ* *ಪ್ರಗತಿವಾಹಿನಿಗೆ ಖಚಿತಪಡಿಸಿದ ಮಾಜಿ ಸಚಿವ*