Latest

ಶಾಸಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ವಾರ್ನಿಂಗ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಸಕಾಂಗ ಪಕ್ಷದ ಸಭೆ, ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವವರೆಗೂ ಯಾವುದೇ ಸಭೆಗಳಿಲ್ಲ, ಶಾಸಕರು ತಮ್ಮ ತಮ್ಮ ಕ್ಷೇತ್ರಗಳತ್ತ ಗಮನಕೊಡಬೇಕು ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ನಮ್ಮ ಸರ್ವ ಸಮ್ಮತ ನಾಯಕ. ಅವರೇ ಮುಂದುವರೆಯುತ್ತಾರೆ. ಈ ಬಗ್ಗೆ ಹೈಕಮಾಂಡ್ ಕೂಡ ಸ್ಪಷ್ಟ ಪಡಿಸಿದೆ. ಹಾಗಾಗಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ಬೇಡ. ಪ್ರತಿಯೊಬ್ಬ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಕೋವಿಡ್ ನಿಯಂತ್ರಣದ ಬಗ್ಗೆ ಗಮನಹರಿಸಲಿ. ಅನಗತ್ಯ ಗೊಂದಲ ಸೃಷ್ಟಿಸುವ ಯಾವುದೇ ಹೇಳಿಕೆ ನೀಡುವಂತಿಲ್ಲ ಎಂದು ಖಡಕ್ ಸೂಚನೆ ನೀಡಿದರು.

ಇನ್ನು ಸಚಿವ ಸಿ.ಪಿ.ಯೋಗೇಶ್ವರ್ ನೀಡಿದ ಹೇಳಿಕೆ ವಿಚಾರವಾಗಿ ಇಂದು ಅವರಿಂದಲೇ ವಿವರಣೆ ಪಡೆಯುವುದಾಗಿ ತಿಳಿಸಿದರು.

ಇದು ಬಿಜೆಪಿ ಸರ್ಕಾರವಾಗಿ ಉಳಿದಿಲ್ಲ; ಸಚಿವ ಸಿ.ಪಿ.ಯೋಗೇಶ್ವರ್ ಅಸಮಾಧಾನ

Home add -Advt

ಗ್ಯಾಂಗ್ ರೇಪ್ ಪ್ರಕರಣ; ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ

Related Articles

Back to top button