Kannada NewsKarnataka NewsLatestPolitics

*ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ ಮಾಡಿದ್ದಾರೆ. ನಿರ್ಗಮಿತ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿಜಯೇಂದ್ರಗೆ ಅಧಿಕರ ಹಸ್ತಾಂತರ ಮಾಡಿದರು.

ವಿಜಯೇಂದ್ರ ಅವರನ್ನು ಕೈಹಿಡಿದು ಕುರ್ಚಿಯಲ್ಲಿ ಕೂರಿಸಿದ ನಳೀನ್ ಕುಮಾರ್ ಕಟೀಲ್ ಬಳಿಕ ಕೇಸರಿ ಶಾಲು, ಹಾರಹಾಕಿ ಅಧಿಕರ ಹಸ್ತಾಂತರಿಸಿದರು. ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಆರ್.ಅಶೋಕ್, ಅರಗ ಜ್ಞಾನೇಂದ್ರ ಸೇರಿದಂತೆ ಹಲವು ಬಿಜೆಪಿ ನಯಕರು ಉಪಸ್ಥಿತರಿದ್ದರು.

ಬಳಿಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ವಿಜಯೇಂದ್ರಗೆ ಸಿಹಿ ತಿನ್ನಿಸಿ ಶುಭ ಹಾರೈಸಿದರು.


Related Articles

Back to top button