Latest

ಮುಂದಿನ ಸಿಎಂ ಸವದಿ ಪೋಸ್ಟ್; ಬಿಜೆಪಿ ರಾಜ್ಯಾಧ್ಯಕ್ಷರ ತಿರುಗೇಟು

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಂಬ ಪೋಸ್ಟರ್ ಬಗ್ಗೆ ಗರಂ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಪೋಸ್ಟ್ ಹಾಕಿದ ಸವದಿ ಅಭಿಮಾನಿಗಳು ಪಕ್ಷದವರಲ್ಲ, ಪಕ್ಷದ ವ್ಯವಸ್ಥೆಯಲ್ಲಿಯೂ ಇಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಕಟೀಲ್, ನಮ್ಮ ಪಕ್ಷದಲ್ಲಿ ಶಿಸ್ತು ಉಲ್ಲಂಘನೆ ಮಾಡಿದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಡಿಸಿಎಂ ಲಕ್ಷ್ಮಣ ಸವದಿ ಇಲಾಖೆಯ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ. ಇದಕ್ಕೆ ವಿಶೇಷ ಅರ್ಥ ಬೇಡ ಎಂದರು.

Home add -Advt

ಇನ್ನು ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಯಡಿಯೂರಪ್ಪನವರೇ ಮುಂದಿನ ಮೂರು ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ. ಮುಖ್ಯಮಂತ್ರಿ ಆಯ್ಕೆ ಮಾಡೋದು ಶಾಸಕರು. ಆದರೆ ಯಾವ ಶಾಸಕರಾಗಲಿ, ಮಂತ್ರಿಗಳಾಗಲಿ ಸಿಎಂ ಬದಲಾವಣೆ ಬಗ್ಗೆ ಮಾತನಾಡಿಲ್ಲ. ಸಚಿವ ಸಂಪುಟ ಪುನಾರಚನೆ ಮುಖ್ಯಮಂತ್ರಿಗಳ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಹೇಳಿದರು.

Related Articles

Back to top button