ಪ್ರಗತಿವಾಹಿನಿ ಸುದ್ದಿ; ಮಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ನಳಿನ್ ಕುಮಾರ್ ಕಟೀಲ್, ನನಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಯಾವುದೇ ಲಕ್ಷಣಗಳು ಇಲ್ಲ, ಆರೋಗ್ಯದಿಂದ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಇತ್ತೀಚೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಕಂದಾಯ ಸಚಿವ ಆರ್.ಅಶೋಕ್ ಹಾಗೂ ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡ ಅವರಿಗೂ ಕೊರೊನಾ ಸೋಂಕು ದೃಢಟ್ಟಿದ್ದು, ಸಚಿವ ಆರ್.ಅಶೋಕ್ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಶಿಕ್ಷಣ ಸಚಿವರು ಹಾಗೂ ಸಂಸದರು ಹೋಂ ಕ್ವಾರಂಟೈನ್ ಆಗಿದ್ದಾರೆ.
ಕೋವಿಡ್ ಟೆಸ್ಟ್ ಅಗತ್ಯ ನನಗಿಲ್ಲ, ಆರೋಗ್ಯ ಸಚಿವರಿಗೆ ಟೆಸ್ಟ್ ಮಾಡಿ; ಅಧಿಕಾರಿಗಳ ವಿರುದ್ಧವೇ ಹರಿಹಾಯ್ದ ಡಿಕೆಶಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ