Kannada NewsKarnataka NewsLatestUncategorized

*ಲೋಕಸಭೆ ಚುನಾವಣೆಗೆ ಬಿಜೆಪಿ ರಣತಂತ್ರ,ಇದೇ 27ರಂದು ಬೆಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ: ಪಿ. ರಾಜೀವ್*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯು ಇದೇ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಜನವರಿ19ಕ್ಕೆ ನಿಗದಿಯಾಗಿದ್ದ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ವಿವಿಧ ಕಾರಣಗಳಿಂದ ಮುಂದೂಡಿಕೆ ಮಾಡಲಾಗಿತ್ತು. ಈಗ ಸಭೆಯನ್ನು ಪಕ್ಷ ಜನವರಿ27ಕ್ಕೆ ಮರು ನಿಗದಿ ಮಾಡಿದೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಶಾಸಕ ಪಿ. ರಾಜೀವ್ , ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಆಗಮಿಸಲಿದ್ದಾರೆ. ಸಭೆ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ನಡೆಯಲಿದೆ ಎಂದು ಹೇಳಿದರು.

ಅಂಬೇಡ್ಕರ್‌ ಪುತ್ಥಳಿಗೆ ಅವಮಾನ: ಬಿಜೆಪಿ ಖಂಡನೆ

ಕಲಬುರ್ಗಿ ಜಿಲ್ಲೆಯ ಗ್ರಾಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರರ ಪುತ್ಥಳಿಗೆ ಕಿಡಿಗೇಡಿಗಳು ಅವಮಾನ ಮಾಡಿದ್ದಾರೆ. ಇದು ತೀವ್ರ ಖಂಡನೀಯ. ಅಂಬೇಡ್ಕರರ ಪುತ್ಥಳಿಗೆ ಅವಮಾನ ಮಾಡಿದರೆ ಅದು ದಲಿತ ಸಮುದಾಯಕ್ಕೆ ಅವಮಾನ ಮಾಡಿದಂತೆ. ಈ ಸರಕಾರದಲ್ಲಿ ದಲಿತರಿಗೂ ಅವಮಾನ ಆಗುತ್ತಿದೆ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಸರಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಅವರು ಆಕ್ಷೇಪಿಸಿದರಲ್ಲದೆ, ಕಿಡಿಗೇಡಿಗಳು ಯಾರೇ ಇದ್ದರೂ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಗೃಹ ಸಚಿವರಿಂದ ಸ್ಪಷ್ಟೀಕರಣಕ್ಕೆ ಆಗ್ರಹ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಹೋಗಿದೆ ಎಂಬುದಕ್ಕೆ ಇದು ಉದಾಹರಣೆ. ಯಾವುದೇ ರೀತಿಯ ರಕ್ಷಣೆ ಕೊಡುವ ಕೆಲಸವನ್ನು ಈ ಸರಕಾರ ಮಾಡಿಲ್ಲ. ಪ್ರತಿಮೆಗಳಿಗೆ ಅವಮಾನ ಮಾಡುವುದು, ಶ್ರೀರಾಮಚಂದ್ರನ ಭಾವಚಿತ್ರ ಹರಿದು ಹಾಕುವುದು ಹೆಚ್ಚಾಗುತ್ತಿದೆ. ಕಾಂಗ್ರೆಸ್ಸಿನ ಮನಸ್ಥಿತಿ ಯಾವ ಕಡೆ ಹೋಗುತ್ತಿದೆ ಎಂಬುದು ಇದರಿಂದ ಗೊತ್ತಾಗುತ್ತದೆ. ಗೃಹ ಸಚಿವರು ಈ ಸಂಬಂಧ ಸ್ಪಷ್ಟೀಕರಣ ಕೊಡಬೇಕು ಎಂದು ಒತ್ತಾಯಿಸಿದರು

Related Articles

Back to top button