Karnataka News

*ಬನ್ನಿ ಕೊಟ್ಟು ವಾಪಸ್ ಆಗುತ್ತಿದ್ದಾಗ ಭೀಕರ ಅಪಘಾತ; ಓರ್ವ ಯುವತಿ ಸ್ಥಳಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ತಾತನಿಗೆ ಬನ್ನಿ ಕೊಡಲೆಂದು ಹೋಗಿದ್ದ ಮೊಮ್ಮಕಳು ಅಪಘಾತಕ್ಕೀಡಾಗಿದ್ದು, ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಇಬ್ಬರು ಯುವತಿಯರು ತಾತನಿಗೆ ಬನ್ನಿ ಕೊಟ್ಟು ವಾಪಾಸ್ ಆಗುತ್ತಿದ್ದ ವೇಳೆ ಯುವತಿಯರ ಬೈಕ್ ಕಾರಿಗೆ ಡಿಕ್ಕಿ ಹೊಡೆದಿದೆ. ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ರಾಯಚೂರು ನಗರದ ಡಿಸಿ ಬಂಗಲೆ ಬಳಿ ಈ ಅಪಘಾತ ಸಂಭವಿಸಿದೆ. 20 ವರ್ಷದ ಸಾಕ್ಷಿ ಮೃತ ಯುವತಿ. ಇನ್ನೋರ್ವ ಯುವತಿ ಸಂಜನಾ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button